Bengaluru 22°C
Ad

ಫೆಡೆಕ್ಸ್ ಕೊರಿಯರ್ ಸಂಸ್ಥೆಯಿಂದ ಕರೆ : 2.20 ಕೋಟಿ ರೂ ವಂಚನೆ

ಸೈಬರ್​ ವಂಚನೆ ಜಾಲದಲ್ಲಿ ಸಿಲುಕಿ ಕೋಟ್ಯಾಂತರ ರೂಪಾಯಿ ಕಳೆದುಕೊಂಡಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನಲ್ಲಿ ನಡೆದಿದೆ.

ಕೊಡಗು: ಸೈಬರ್​ ವಂಚನೆ ಜಾಲದಲ್ಲಿ ಸಿಲುಕಿ ಕೋಟ್ಯಾಂತರ ರೂಪಾಯಿ ಕಳೆದುಕೊಂಡಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನಲ್ಲಿ ನಡೆದಿದೆ.

ಕರಡಿಗೋಡು ಗ್ರಾಮದ ದೇವಯ್ಯ  (70) ಅವರಿಗೆ ವಂಚಕರು ಕರೆ ಮಾಡಿ ತಾವು ಫೆಡೆಕ್ಸ್ ಕೊರಿಯರ್ ಸಂಸ್ಥೆಯಿಂದ ಕರೆ ಮಾಡುತ್ತಿರುವುದು ಎಂದು ಪರಿಚಯ ಮಾಡಿಕೊಂಡಿದ್ದಾರೆ.

ಬಳಿಕ ನಿಮ್ಮ ಹೆಸರಿಗೆ ಡ್ರಗ್ಸ್ ಬಂದಿದೆ ಎಂದಿದ್ದಾರೆ. ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದರೆ ಸಂಕಷ್ಟವಾಗಲಿದೆ ಎಂದಿದ್ದಾರೆ. ವಂಚಕರ ಮಾತಿಗೆ ದೇವಯ್ಯ ಅವರು ಬೆದರಿಸಿದ್ದಾರೆ.

ಬಳಿಕ ವಂಚಕರು ತಮ್ಮ ಖಾತೆಗೆ ಎರಡು ಹಂತದಲ್ಲಿ ಒಟ್ಟು 2.20 ಕೋಟಿ ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಬಳಿಕ ದೇವಯ್ಯ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಪ್ರಕರಣದ ಬಗ್ಗೆ  ದೇವಯ್ಯ ಮಡಿಕೇರಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.

Ad
Ad
Nk Channel Final 21 09 2023
Ad