ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 32 ದಿನಗಳ ಅವಧಿಯಲ್ಲಿ 2.28ಕೋಟಿ ರೂಪಾಯಿ ಸಂಗ್ರಹವಾಗಿದೆ.
ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ರಘುರವರ ಸಮ್ಮುಖದಲ್ಲಿ ದೇವರ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ. ಎಣಿಕೆ ಕಾರ್ಯವು ನಡೆದಿದೆ.
32 ದಿನಗಳ ಅವಧಿಯಲ್ಲಿ 2,28,03,803 ರೂಪಾಯಿ ಹುಂಡಿಯಲ್ಲಿ ಸಂಗ್ರಹವಾದರೆ 59 ಗ್ರಾಂ ಚಿನ್ನ, 1.500 ಕೆಜಿ ಬೆಳ್ಳಿ ಸಂಗ್ರಹವಾಗಿದೆ. ಇದಲ್ಲದೆ, ವಿದೇಶಿ ಕರೆನ್ಸಿಗಳು 6ನೋಟುಕೂಡ ಪತ್ತೆಯಾಗಿವೆ. ಜೊತೆಗೆ ಚಲಾವಣೆಯಿಲ್ಲದ ಎರಡು ಸಾವಿರ ಮುಖಬೆಲೆಯ 21ನೋಟುಗಳನ್ನು ಭಕ್ತರು ದೇವರ ಹುಂಡಿಗೆ ಹಾಕಿದ್ದಾರೆ
ಹುಂಡಿ ಏಣಿಕೆ ವೇಳೆ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ.ಜಿ.ಎಲ್, ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರ ನಾಗೇಶ್, ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಕು.ಮಧುಶ್ರೀ, ಪ್ರಾಧಿಕಾರದ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ಬ್ಯಾಂಕ್ ಆಪ್ ಬರೋಡ ವ್ಯವಸ್ಥಾಪಕರು, ಸಿಬ್ಬಂದಿ ಹಾಜರಿದ್ದರು.

