Bengaluru 23°C
Ad

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಹುಲಿ ದಾಳಿ

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದ್ದು ಅದೃಷ್ಟವಶಾತ್ ರೈತ ಸಾವಿನ ದವಡೆಯಿಂದ ಪಾರಾಗಿದ್ದಾರೆ.

ಗುಂಡ್ಲುಪೇಟೆ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ನಡೆದಿದ್ದು ಅದೃಷ್ಟವಶಾತ್ ರೈತ ಸಾವಿನ ದವಡೆಯಿಂದ ಪಾರಾಗಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕಾಂಚಿನ ಗ್ರಾಮವಾಗಿರುವ ಯಡವನಹಳ್ಳಿ ಗ್ರಾಮದ ರೈತ ಮಹದೇವನಾಯ್ಕ ರವರ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹ

ಗಾಯಗೊಂಡ ಮಹದೇವನಾಯ್ಕ ರವರನ್ನು ಬೇಗೂರು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ವಿಷಯ ತಿಳಿದ ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್ ಆಸ್ಪತ್ರೆಗೆ ಭೇಟಿ ನೀಡಿ ರೈತನ ಆರೋಗ್ಯ ವಿಚಾರಿಸಿದ್ದಾರೆ.

Ad
Ad
Nk Channel Final 21 09 2023
Ad