ಚಾಮರಾಜನಗರ:  ಕಾರು ಚಾಲಕನ ಓವರ್‌ ಸ್ಪೀಡ್‌ ಇಬ್ಬರ ಪ್ರಾಣ ಕಸಿದಿದೆ. ಎರ್ಟಿಗಾ ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಊಟಿ ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ

ಗುಂಡ್ಲುಪೇಟೆ ಎಪಿಎಂಸಿ ಮಾರ್ಕೆಟ್ ಬಳಿ ಈ ಅವಘಡ ಸಂಭವಿಸಿದ್ದು, ವೇಗವಾಗಿ ಬಂದ ಎರ್ಟಿಗಾ ಕಾರು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಮೃತರ ಗುರುತು ಪತ್ತೆಯಾಗಿಲ್ಲ.