ಚಾಮರಾಜನಗರ: ತಾಲ್ಲೂಕಿನ ಜ್ಯೋತಿಗೌಡನಪುರದಲ್ಲಿ ಈಚೆಗೆ ಅಂಬೇಡ್ಕರ್ ಹಾಗೂ ಬುದ್ಧನ ಮೂರ್ತಿಗಳನ್ನು ಭಗ್ನಗೊಳಿಸಿ ಫ್ಲೆಕ್ಸ್ ಹಾಗೂ ಭಾವಚಿತ್ರಗಳಿಗೆ ಹಾನಿ ಮಾಡಿದ್ದ ಆರೋಪಿ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
‘ಹಿಂದೆ, ಗ್ರಾಮದ ಪರಿಶಿಷ್ಟ ಜಾತಿಯ ಮಹಿಳೆಗೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಮುಖಂಡರು ಆರೋಪಿಗೆ ₹ 60 ಸಾವಿರ ದಂಡ ವಿಧಿಸಿದ್ದರು. ಅದಕ್ಕೆ ಪ್ರತೀಕಾರವಾಗಿ ಮದ್ಯದ ಮತ್ತಿನಲ್ಲಿ ಕೃತ್ಯ ಎಸಗಿದ್ದು ತನಿಖೆ ವೇಳೆ ದೃಢಪಟ್ಟಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿ.ಟಿ.ಕವಿತಾ ತಿಳಿಸಿದ್ದಾರೆ.

