ಚಾಮರಾಜನಗರ: ರಾತ್ರಿ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಬಾಳೆ ಬೆಳೆ, ಸಂಪೂರ್ಣವಾಗಿ ನೆಲೆ ಕಚ್ಚಿದೆ. ಚಾಮರಾಜನಗರ ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಬಾಳೆ ಬೆಳೆ ಹಾನಿಯಾಗಿದೆ.

ನಿಂಗರಾಜು ನಾಯಕ ಎಂಬ ರೈತ ತನ್ನ ಜಮೀನಿನಲ್ಲಿ ಸುಮಾರು ಒಂದು ಎಕರೆ ಪ್ರದೇಶದಲ್ಲಿ ನೇಂದ್ರ ಬಾಳೆ ಬೆಳಿದಿದ್ದರು. ಸುಮಾರು 1 ಲಕ್ಷಕ್ಕೂ ಹೆಚ್ಚು ಹಣವನ್ನು ಖರ್ಚು ಮಾಡಿ ಬಾಳೆ ಬೆಳೆದಿದ್ದು , ಇನ್ನು 15 ದಿನಗಳಲ್ಲಿ ಕಟಾವಿಗೆ ಬಂದಿದ್ದ ಬಾಳೆಗೊನೆಗಳು ಬಿರುಗಾಳಿಯ ಮಳೆಗೆ ಸಿಲುಕಿ ನೆಲಕಚ್ಚಿದೆ. ಸುಮಾರು 3 ಲಕ್ಷ ರೂ. ನಷ್ಟವಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ರೈತ ನಿಂಗರಾಜು ನಾಯಕ ಮನವಿ ಮಾಡಿದ್ದಾರೆ.

View this post on Instagram

A post shared by News Karnataka (@newskarnataka)