ಚಾಮರಾಜನಗರ: ಕಾವೇರಿ ಹೊರಹರಿವು ಹೆಚ್ಚಿದ ಹಿನ್ನೆಲೆ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ಭರಚುಕ್ಕಿ ಜಲಪಾತವು ಭೋರ್ಗರೆದು ಧುಮ್ಮಿಕ್ಕುತ್ತಿರುವ ದೃಶ್ಯ  ಕಣ್ಮನ ಸೆಳೆಯುತ್ತಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಹಿನ್ನೆಲೆ ಭರಚುಕ್ಕಿ ಜಲಪಾತವು ಮೈದುಂಬಿ ಧುಮ್ಮಿಕ್ಕುತ್ತಿದ್ದು ಜಲಪಾತದ  ಬೆಡಗು ಎಲ್ಲರನ್ನೂ ಕೈ ಬೀಸಿ ಕರೆಯುತ್ತಿದೆ.‌ ಜಲ ವೈಭವಕ್ಕೆ ಪ್ರವಾಸಿಗರು ಮನಸೋಲುತ್ತಿದ್ದಾರೆ.