ಚಾಮರಾಜನಗರ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಅಗರ – ಮಾಂಬಳ್ಳಿ ಮಾರ್ಗಮಧ್ಯ ನಡೆದಿದೆ.
ಕೊಳ್ಳೇಗಾಲ ಪಟ್ಟಣದ ಉಪ್ಪಾರ ಮೊಳೆ ಬಡಾವಣೆಯ ನಿವಾಸಿ ಧನುಷ್ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ವೃತ್ತಿಯಲ್ಲಿ ಇಂಜಿನಿಯರ್ ಆಗಿ ಬೆಂಗಳೂರಲ್ಲಿ ಯುವಕ ಕೆಲಸ ನಿರ್ವಹಿಸುತ್ತಿದ್ದನು.
ಬೆಂಗಳೂರಿನಿಂದ ಅಜ್ಜಿ ಮನೆ ಮದ್ದೂರಿಗೆ ಬರುವ ವೇಳೆ ಅವಘಡ ಸಂಭವಿಸಿದೆ. ಸ್ಥಳಕ್ಕೆ ಮಾಂಬಳ್ಳಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಾಗಿದೆ.

