ಚಾಮರಾಜನಗರ : ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಚಿಲಕವಾಡಿ ಬಳಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಗುಂಡೇಗಾಲ ಗ್ರಾಮದ ನಂಜುಂಡಸ್ವಾಮಿ,ಕಾವ್ಯ ದಂಪತಿ ಮಗಳ ಜೊತೆಗೆ ಮೈಸೂರಿಗೆ ಹೋಗುತ್ತಿದ್ದರು, ಎದುರಿಗಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಹಿನ್ನೆಲೆ ಬಾಲಕಿಗೆ ತೀವ್ರವಾದ ಪೆಟ್ಟಾಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮದ್ಯೆ ಮೃತಪಟ್ಟಿದ್ದಾಳೆ. ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

