ಚಾಮರಾಜನಗರ : ಜಮೀನಿನಲ್ಲಿ ಗಾಂಜಾ ಬೆಳೆದಿದ್ದು, ಓರ್ವನನ್ನು ಬಂಧಿಸಿರುವ ಘಟನೆ ಹನೂರು ತಾಲ್ಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ನಡೆದಿದೆ.

ದೊಮ್ಮನಗದ್ದೆ, ಪುದುನಗರದ ಉಡುತೊರೆ ಹಳ್ಳ ಪಕ್ಕದ ಜಮೀನಿನಲ್ಲಿ ಗಾಂಜಾ ಬೆಳೆಯಲಾಗಿದೆ. ಜಮೀನಿನಲ್ಲಿ ಗಾಂಜಾ ಗಿಡಗಳನ್ನ ಬೆಳೆದಿದ್ದ ಆರೋಪಿಯನ್ನು ಬಂಧಿಸಲಾಗಿದೆ. ನಾಗರಾಜು ಅಲಿಯಾಸ್ ರಾಜ (45) ಬಂಧಿನ ಆರೋಪಿ.

ಅಂದಾಜು ಸುಮಾರು ₹5.25 ಲಕ್ಷ ಮೌಲ್ಯದ ಗಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ. ಕವಿತಾ, ಡಿವೈಎಸ್ಪಿ ಧರ್ಮೇಂದ್ರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಚಿಕ್ಕರಾಜಶೆಟ್ಟಿ ನೇತೃತ್ವದ ರಾಮಾಪುರ ಪೊಲೀಸರಿಂದ ಕಾರ್ಯಾಚರಣೆ ನಡೆಸಲಾಗಿದೆ.