ಚಾಮರಾಜನಗರ : ತಾಲ್ಲೂಕಿನ ಸುವರ್ಣಾವತಿ ಜಲಾಶಯ ಸಮೀಪ ತಮಿಳುನಾಡಿನ ಸತ್ಯಮಂಗಲದಿಂದ ಬರುತ್ತಿದ್ದ ಕಾರು ಹಾಗು ಲಾರಿಯ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದವರು ಗಾಯಗೊಂಡಿರುವ ಘಟನೆ ನಡೆದಿದೆ.
ಚಾಮರಾಜನಗರ ತಾಲ್ಲೂಕಿನ ಸುವರ್ಣಾವತಿ ಜಲಾಶಯ ಸಮೀಪ ನಡೆದ ಲಾರಿ ಮತ್ತು ಕಾರಿನ ನಡುವಿನ ರಸ್ತೆ ಅಪಘಾತದಲ್ಲಿ ಕೆಲವರಿಗೆ ಪೆಟ್ಟಾಗಿದೆ ಈ ನಡುವೆ ರಸ್ತೆ ನಡುವೆಯೇ ಲಾರಿ ಉರುಳಿ ಬಿದ್ದಿದ್ದರಿಂದ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಘಟನಾ ಸಂಬಂದ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

