Bengaluru 24°C
Ad

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಪ್ರಯಾಣಿಕರು ಪಾರು

ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿನ ಮಲ್ಲಯ್ಯನಪುರ ಬಳಿ ಕಾರೊಂದು ಮರಕ್ಕೆ ಗುದ್ದಿದ ಪರಿಣಾಮ ಪಕ್ಕದಲ್ಲಿದ್ದ ವಿದ್ಯುತ್ ಕಂಬ ಮುರಿದು ಕಾರಿನ ಮೇಲೆ ಬಿದ್ದಿದೆ.

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಸಮೀಪ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿನ ಮಲ್ಲಯ್ಯನಪುರ ಬಳಿ ಕಾರೊಂದು ಮರಕ್ಕೆ ಗುದ್ದಿದ ಪರಿಣಾಮ ಪಕ್ಕದಲ್ಲಿದ್ದ ವಿದ್ಯುತ್ ಕಂಬ ಮುರಿದು ಕಾರಿನ ಮೇಲೆ ಬಿದ್ದಿದೆ. ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಐದು ಜನರು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದ ಭಕ್ತಾದಿಗಳು ಮಹದೇಶ್ವರ ಬೆಟ್ಟಕ್ಕೆ ಹೊಗಿ ಪೂಜೆ ಮುಗಿಸಿಕೊಂಡು ಹನೂರು ಮಾರ್ಗವಾಗಿ ಮಳವಳ್ಳಿಗೆ ವಾಪಾಸ್ಸ್ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ವಿದ್ಯುತ್ ಕಂಬ ಕಾರಿನ ಮೇಲೆ ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲಎಂದು ತಿಳಿದು ಬಂದಿದೆ.

Ad
Ad
Nk Channel Final 21 09 2023
Ad