ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಅಪಾಯಕಾರಿ ಚಾಲನೆ ಹಾಗೂ ಆಟೋ ವೀಲ್ಹಿಂಗ್ ಮಾಡುತ್ತಿದ್ದ ಮೂವರ ವಿರುದ್ಧ ಪ್ರಕರಣ ದಾಖಲಿಸಿರುವ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಆಟೋಗಳನ್ನ ವಶಪಡಿಸಿಕೊಂಡಿದ್ದಾರೆ.

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟದ ಮುಖ್ಯ ರಸ್ತೆಯಲ್ಲಿ ಮೂರು ಆಟೋ ಚಾಲಕರು ಅಜಾಗರೂಕತೆ ಚಾಲನೆ ಮತ್ತು ಆಟೋ ವೀಲ್ಹಿಂಗ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದ ಆಟೋ ವೀಲ್ಹಿಂಗ್ ದೃಶ್ಯ ವೈರಲ್ ಆಗಿತ್ತು, ಅದನ್ನು ಗಮನಿಸಿದ ಮಹದೇಶ್ವರ ಬೆಟ್ಟ ಪೊಲೀಸರು ಆಟೋಗಳನ್ನು ಪತ್ತೆ ಹಚ್ಚಿ ವಶ ಪಡಿಸಿಕೊಂಡು, ಚಾಲಕರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.