Bengaluru 22°C
Ad

ಬೈಕ್ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಸವಾರ ಸಾವು

ಬೈಕ್ ಕಾರು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನ ಊಟಿ- ಮೈಸೂರು ರಾಷ್ಟ್ರೀಯ ಹೆದ್ದಾರಿ 209 ಗರಗನಹಳ್ಳಿ ಗೇಟ್ ಬಳಿಯಲ್ಲಿ ನಡೆದಿದೆ.

ಗುಂಡ್ಲುಪೇಟೆ: ಬೈಕ್ ಕಾರು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನ ಊಟಿ- ಮೈಸೂರು ರಾಷ್ಟ್ರೀಯ ಹೆದ್ದಾರಿ 209 ಗರಗನಹಳ್ಳಿ ಗೇಟ್ ಬಳಿಯಲ್ಲಿ ನಡೆದಿದೆ.

ಮಲ್ಲೇಶ್ ಮೃತಪಟ್ಟ ಸವಾರ. ಈತ  ಆಲತ್ತೂರು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಮೈಸೂರು ಕಡೆಯಿಂದ ವೇಗವಾಗಿ ಬಂದ ಕಾರು ಬೈಕ್ ಗೆ ಗುದ್ದಿದ ಪರಿಣಾಮ ಸವಾರ  ಮಲ್ಲೇಶ್ ನ ತಲೆ ಹಾಗೂ ಕೈ ಕಾಲಿಗೆ ತೀವ್ರ ತರವಾದ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಮಾಹಿತಿ ಅರಿತ ಬೇಗೂರು ಠಾಣೆ ಪೊಲೀಸರು ಕೂಡಲೇ ಆಗಮಿಸಿ 108 ಆಂಬುಲೆನ್ಸ್ ನಲ್ಲಿ ಗಾಯಾಳುಗಳನ್ನು ಬೇಗೂರು  ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಘಟನೆಯಿಂದ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ. ಬೇಗೂರು ಪೊಲೀಸರು ಎರಡು  ವಾಹನಗಳನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Ad
Ad
Nk Channel Final 21 09 2023
Ad