ಗುಂಡ್ಲುಪೇಟೆ : ಆಹಾರವನ್ನರಸಿ ಬಂದಿದ್ದ ಕಾಡಾನೆಯೊಂದು ಜಮೀನಿನಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ತಂತಿ ಬೇಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯಕ್ಕೆ ಸೇರಿದ ಮಂಗಲ ಗ್ರಾಮದಲ್ಲಿ ನಡೆದಿದೆ.

ಮಂಗಲ ಗ್ರಾಮದ ಪುಟ್ಟಸುಬ್ಬಪ್ಪ ಎಂಬವರ ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಬೇಲಿಗೆ ಸಿಲುಕಿ ಸುಮಾರು 30 ವರ್ಷ ವಯಸ್ಸಿನ ಹೆಣ್ಣಾನೆ ಸ್ಥಳದಲ್ಲೇ ಸಾವನ್ನಪ್ಪಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ಮರಣೋತ್ತರ ಪರೀಕ್ಷೆ ನಡೆಸಿ ಜಮೀನು ಮಾಲೀಕ ಪುಟ್ಟಸುಬ್ಬಪ್ಪ ವಿರುದ್ದ ಕ್ರಮಕ್ಕೆ ಮುಂದಾಗಿದ್ದಾರೆ.