ಚಾಮರಾಜನಗರ : ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತದಿಂದ ಇಬ್ಬರು ಯುವಕರು ದುರ್ಮರಣಕ್ಕೀಡಾದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ – ಯಳಂದೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ -ಯಳಂದೂರು ಮಾರ್ಗ ಮಧ್ಯದ ಎಳೆಪಿಳ್ಳಾರೆ ಬಳಿ ಕಬ್ಬು ತುಂಬಿಕೊಂಡು ನಿಂತಿದ್ದ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಮದ್ದೂರು ಸಮೀಪದ ಎಳೆಪಿಳ್ಳಾರಿ ಬಳಿಯ ಜಮೀನುಗಳಲ್ಲಿ ಕಬ್ಬು ತುಂಬಿಕೊಂಡು ಕಾರ್ಖಾನೆಗೆ ತೆರಳಲು ನಿಂತಿದ್ದ ಲಾರಿಗೆ ಉಮ್ಮತೂರು ಕಡೆಯಿಂದ ಬಂದಂತಹ ಟೊಮೊಟೊ ತುಂಬಿದಂತಹ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿ ಇದ್ದಂತಹ ಉಮ್ಮತ್ತೂರು ಗ್ರಾಮದ 22 ವರ್ಷದ ಸುಮಂತ್ 16 ವರ್ಷದ ನಿತಿನ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ . ಈ ಸಂಬಂಧ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

