ಚಾಮರಾಜನಗರ : ಮಹದೇಶ್ವರಬೆಟ್ಟದಲ್ಲಿ ರಾತ್ರೋರಾತ್ರಿ ಮೂರು ಬೈಕುಗಳು ಬೆಂಕಿಗೆ ಆಹುತಿಯಾಗಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

ರಾಜ್ಯದ ವಿವಿಧ ಭಾಗಗಳಿಂದ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟಕ್ಕೆ ಬಂದ ಭಕ್ತರು, ಶ್ರೀ ಕ್ಷೇತ್ರದ ಸಂಕಮ್ಮ ನಿಲದ ಬಳಿ ಬೈಕುಗಳನ್ನು ನಿಲ್ಲಿಸಿ ರಾತ್ರಿ ವಾಸ್ತವ್ಯ ಹೂಡಿದ್ದರು.

ಆದರೆ ಸೋಮವಾರ ಮುಂಜಾನೆ ಸುಮಾರು 4 ಗಂಟೆಯ ವೇಳೆಗೆ ಮೂರು ಬೈಕುಗಳು ಬೆಂಕಿಗೆ ಆಹುತಿಯಾಗಿರುವುದನ್ನು ಸ್ಥಳೀಯರು ಗಮನಿಸಿದ್ದು, ಬೆಂಕಿಯನ್ನು ನಂದಿಸಲು ಮುಂದಾಗಿದ್ದರೂ ಕೂಡ ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.