Bengaluru 27°C
Ad

ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಯುವತಿಗೆ ಆಹ್ವಾನ

ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಉಮ್ಮತ್ತೂರಿನಲ್ಲಿ ಕರಕುಶಲ ಉದ್ಯಮ ನಡೆಸುತ್ತಿರುವ ವರ್ಷಾ ಎಂಬ ಯುವತಿಗೆ ಆಹ್ವಾನಿಸಲಾಗಿದೆ. ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದು ಗಣ್ಯಾತಿಗಣ್ಯರಿಗೆ ಅಹ್ವಾನ ನೀಡಲಾಗಿದೆ.

ಚಾಮರಾಜನಗರ: ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಉಮ್ಮತ್ತೂರಿನಲ್ಲಿ ಕರಕುಶಲ ಉದ್ಯಮ ನಡೆಸುತ್ತಿರುವ ವರ್ಷಾ ಎಂಬ ಯುವತಿಗೆ ಆಹ್ವಾನಿಸಲಾಗಿದೆ. ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದು ಗಣ್ಯಾತಿಗಣ್ಯರಿಗೆ ಅಹ್ವಾನ ನೀಡಲಾಗಿದೆ.

ಮೋದಿ ಅವರ ಮನ್‌ಕಿ ಬಾತ್​ನಿಂದ ಪ್ರೇರಣೆಗೊಂಡು ಕರಕುಶಲ ಉದ್ಯಮ ಆರಂಭಿಸಿದ್ದರು. ಅನುಪಯುಕ್ತ ಬಾಳೆ ದಿಂಡಿನಿಂದ ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಉದ್ಯಮ ನಡೆಸುತ್ತಿರುವ ವರ್ಷಾ, ಹಲವು ಮಹಿಳೆಯರಿಗೆ ಉದ್ಯಮ ನೀಡುವ ಜೊತೆಗೆ ಸ್ವಾವಲಂಬಿ ಬದುಕು ನಡೆಸುತ್ತಿದ್ದಾರೆ. ವರ್ಷಾ ಸಾಧನೆಯ ಬಗ್ಗೆಯು ಮನ್.ಕಿ ಬಾತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವೋಕಲ್ ಫಾರ್ ಲೋಕಲ್ ಎಂದು ಪ್ರಶಂಸಿದ್ದರು. ಇದೀಗ ವರ್ಷಾ ಅವರಿಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದ್ದು, ಈಗಾಗಲೇ ನವದೆಹಲಿ ತಲುಪಿದ್ದಾರೆ.

Ad
Ad
Nk Channel Final 21 09 2023
Ad