ಚಾಮರಾಜನಗರ :ಕೆ.ಎಸ್.ಆರ್.ಟಿ.ಸಿ ಬಸ್ ಚಕ್ರ ಹರಿದು ಲಾರಿ ಚಾಲಕನೊಬ್ಬ ಸಾವನ್ನಪ್ಪಿದ ಘಟನೆ ಚಾಮರಾಜನಗರ ಪಟ್ಟಣದಲ್ಲಿ ನಡೆದಿದೆ.

ಚಾಮರಾಜನಗರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಕೊಳ್ಳೇಗಾಲ ಮಾರ್ಗವಾಗಿ ಬೆಂಗಳೂರಿಗೆ ತೆರಳಲು ಹೊರಟ್ಟಿದ್ದ ಬಸ್ ಗೆ ಬೈಕ್ ನಲ್ಲಿ ಸಂಚಾರ ಮಾಡುತ್ತಿದ್ದ ತಾಲ್ಲೂಕಿನ ಕಾಡಹಳ್ಳಿ ಗ್ರಾಮದ ಶಿವಮಲ್ಲಪ್ಪ(44) ಎಂಬಾತನಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯೇ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಸಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.