ಚಾಮರಾಜನಗರ : ಕೆಎಸ್ಸಾರ್ಟಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಅರಣ್ಯ ಪ್ರದೇಶಕ್ಕೆ ನುಗ್ಗಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಾಲ್ ರೋಡ್ ಸಮೀಪ ನಡೆದಿದೆ.

ಹನೂರಿನಿಂದ ಜಲ್ಲಿಪಾಳ್ಯ ಕಡೆಗೆ ತೆರಳುತ್ತಿದ್ದ ಬಸ್, ಎದುರಿಗೆ ಬಂದ ಮತ್ತೊಂದು ವಾಹನವನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದೆ ಎಂದು ತಿಳಿದುಬಂದಿದೆ. ಅಪಘಾತದ ವೇಳೆ ಬಸ್‌ನಲ್ಲಿದ್ದ 39 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.