ಚಾಮರಾಜನಗರ: ಕೊಟ್ಟಿಗೆಗೆ ನುಗ್ಗಿ ಚಿರತೆ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದ ಘಟನೆ ಯಳಂದೂರು ತಾಲೂಕಿನ ಚಾಮಲಾಪುರ ಗ್ರಾಮದಲ್ಲಿ ನಡೆದಿದೆ.

ಸಿದ್ದಪ್ಪ ಶೆಟ್ಟಿ ಎಂಬುವವರಿಗೆ ಸೇರಿದ ಹಸು ಆಗಿದ್ದು, ಗ್ರಾಮದಲ್ಲಿ ಚಿರತೆ ಅಟ್ಯಾಕ್  ಆತಂಕ ಮೂಡಿಸಿದೆ. ಚಿರತೆ ಸೆರೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.