ಚಾಮರಾಜನಗರ : ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ 2.36 ಕೋಟಿ ರೂ. ಸಂಗ್ರಹವಾಗಿದೆ.
ರಜಾ ದಿನ, ಅಮಾವಾಸ್ಯೆ ಜಾತ್ರಾ ಮಹೋತ್ಸವ, ಶಕ್ತಿ ಯೋಜನೆ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 2,36,73,185 ನಗದು 70 ಗ್ರಾಂ ಚಿನ್ನ ಹಾಗೂ 1,712 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ. ಇದಲ್ಲದೆ ಇ ಹುಂಡಿಯಿಂದ 5,22,131 ರೂ., 20 ವಿದೇಶಿ ನೋಟುಗಳು ಸಂಗ್ರಹವಾಗಿದೆ.

