ಗುಂಡ್ಲುಪೇಟೆ : ಪಟ್ಟಣದ ವಿವಿಧ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿದ ಪುರಸಭಾ ಅಧಿಕಾರಿಗಳು 55 ಕೆಜಿ ಪ್ಲಾಸ್ಟಿಕ್ ಕವರ್ ಗಳನ್ನ ವಶಕ್ಕೆ ಪಡೆದು 6500  ದಂಡ ವಿಧಿಸಿದ್ದಾರೆ.

ಘನತ್ಯಾಜ್ಯ ವಸ್ತುಗಳ ನಿರ್ವಹಣೆ, ಪ್ಲಾಸ್ಟಿಕ್‌ ವಸ್ತುಗಳ ನಿರ್ವಹಣೆ ಮತ್ತು ನಿಬಂಧನೆ ನಿಯಮ 2016 ರ ಕಾಯ್ದೆಯಡಿ ಪ್ಲಾಸ್ಟಿಕ್‌ ಕೈಚೀಲ ನಿಷೇಧಿಸಿದ್ದರೂ ಕೆಲವು ಅಂಗಡಿಗಳ ಮಾಲೀಕರು ಎಗ್ಗಿಲ್ಲದೇ ಪ್ಲಾಸ್ಟಿಕ್‌ ಕವರ್‌ ಬಳಕೆ ಮಾಡುತ್ತಿದ್ದರು.

ಪಟ್ಟಣದ ಅಂಗಡಿಗಳ ಮಾಲೀಕರಿಗೆ ಹಲವಾರು ಬಾರಿ ತಿಳುವಳಿಕೆ ನೀಡಿ, ಈ ಹಿಂದೆ ಮೂರ್ನಾಲ್ಕು ಬಾರಿ ದಾಳಿ ನಡೆಸಿದ್ದರೂ ಮತ್ತೆ ಪ್ಲಾಸ್ಟಿಕ್‌ ಚೀಲ ಬಳಕೆಯಾಗ್ತಿತ್ತು. ಇನ್ನು ಮುಂದೆ ಇಂತಹ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಹಾಗೂ ದಂಡ ವಿಧಿಸಿ ಕೇಸ್‌ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.