ಚಾಮರಾಜನಗರ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪಿಕಪ್ ವಾಹನ ಹೊತ್ತಿ ಉರಿದ  ಘಟನೆ ಚಾಮರಾಜನಗರ ತಮಿಳುನಾಡು ಗಡಿ ದಿಂಬಂ ಘಾಟ್ನಲ್ಲಿ ನಡೆದಿದೆ.

ಮೈಸೂರಿನಿಂದ ಸತ್ಯಮಂಗಲಂಗೆ ವಾಹನಗಳ ಬಿಡಿಭಾಗ ಸಾಗಿಸುತ್ತಿದ್ದ ಪಿಕಪ್ ವಾಹನ ದಿಂಬಂ ಘಾಟ್ ನ 6 ನೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಬಳಿಕ ಇದ್ದಕ್ಕಿದ್ದಂತೆ ಹೊತ್ತಿ ಉರಿದಿದೆ, ಘಟನೆಯಿಂದ ಬೆಂಗಳೂರು ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಅರ್ಧ ತಾಸು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು, ಸದ್ಯ ಅಪಘಾತದಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.