ಗುಂಡ್ಲುಪೇಟೆ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಯಶಸ್ವಿಯಾಗಿ ಎರಡು ವರ್ಷ ಪೂರೈಸಿದೆ ಎಂದು ಶಾಸಕ ಗಣೇಶ್ ಪ್ರಸಾದ್ ಹೇಳಿದರು.

ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆ ಆರಂಭವಾಗಿ ಎರಡು ವರ್ಷ ಆದ ಹಿನ್ನೆಲೆ ನಿಗಮದ ಬಸ್ ಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು,ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆಯಲ್ಲಿ ಗುಂಡ್ಲುಪೇಟೆ ಘಟಕದದಿಂದ ಸುಮಾರು 3ಕೋಟಿ 80ಲಕ್ಷಕ್ಕೂ ಹೆಚ್ಚು ಮಹಿಳೆಯರು ಎರಡು ವರ್ಷದಿಂದ ಉಚಿತವಾಗಿ ಪ್ರಯಾಣ ಮಾಡಿದ್ದಾರೆ ಹಾಗು ಗುಂಡ್ಲುಪೇಟೆ ಡಿಪೋಗೆ ಮೂರು ಕೋಟಿ ಆದಾಯ ಬಂದು ಸರ್ಕಾರದ ಯೋಜನೆ ಯಶಸ್ವಿಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಶಕ್ತಿ ಯೋಜನೆಯನ್ನು ರಾಜ್ಯದಲ್ಲಿ ಮುಖ್ಯಮಂತ್ರಿ,ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರು ಚಾಲನೆ ನೀಡಿದ್ದಾರೆ ಅದರಂತೆ ಗುಂಡ್ಲುಪೇಟೆ ಕ್ಷೇತ್ರದಲ್ಲಿ ನಾನು ಚಾಲನೆ ನೀಡಿದ್ದೇನೆ. ಈ ಒಂದು ಸರ್ಕಾರದ ಯೋಜನೆ ಇನ್ನೂ ವಿಸ್ತರಣೆಯಾಗಿ ಮಹಿಳೆಯರು ಹೆಚ್ಚಿನ ಅನುಕೂಲ ಪಡೆದುಕೊಳ್ಳಲ್ಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷ ಮಧುಸೂದನ್, ಸದಸ್ಯ ಶ್ರೀನಿವಾಸ್ ಕಣ್ಣಪ್ಪ,ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ನಂಜಪ್ಪ, ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಹೆಚ್.ಎನ್ ಬಸವರಾಜು, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನದ ಉಮಾಪತಿ,ಪ್ರದೀಪ್, ಪಿ.ಬಿ ರಾಜಶೇಖರ. ತಹಸೀಲ್ದಾರ್ ಟಿ.ರಮೇಶ್ ಬಾಬು, ಡಿಪೋ ವ್ಯವಸ್ಥಾಪಕ ತ್ಯಾಗರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.