ಚಾಮರಾಜನಗರ : ಲಾರಿ, ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬಾಲಕ ಮೃತಪಟ್ಟು ಮೂವರು ಬಾಲಕರ ಸ್ಥಿತಿ ಚಿಂತಾಜನಕವಾದ ಘಟನೆ ಚಾಮರಾಜನಗರದ ಗಾಳಿಪುರ ಬೈಪಾಸ್ ನಲ್ಲಿ ನಡೆದಿದೆ.

ಚಾಮರಾಜನಗರದ ಕೆ.ಪಿ.ಮೊಹಲ್ಲಾದ ಮೆರಾನ್( 10) ಮೃತಪಟ್ಟ ಬಾಲಕ. ಮೆರಾನ್ ನ ಅಣ್ಣ ಫೈಜಲ್, ಅದಾನ್ ಪಾಷಾ ಹಾಗೂ ರಿಯಾಸ್ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಕಾರಿನ ಚಾಲಕ ಶ್ರೀಕಾಂತ್ (22) ಹಾಗೂ ಮಣಿಕಾಂತ್(45)  ಎಂಬ್ಬರಿಗೆ ಗಾಯಗಳಾಗಿದ್ದು ಇವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಮರಾಜನಗರ ಟ್ರಾಫಿಕ್ ಠಾಣೆ ಪೊಲೀಸರು ಮೂರು ವಾಹನಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.