ಚಾಮರಾಜನಗರ : ಮಲೆ ಮಹದೇಶ್ವರ ವನ್ಯ ಜೀವಿಧಾಮದ ಹನೂರು ತಾಲ್ಲೂಕಿನ ಮೀಣ್ಯಂ ಗ್ರಾಮದಲ್ಲಿ ಐದು ಹುಲಿಗಳು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ನೈತಿಕ ಹೊಣೆ ಹೊತ್ತು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ಆಗ್ರಹಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶೀಸಿ ಮಾತನಾಡಿದ ಹೊನ್ನೂರು ಪ್ರಕಾಶ್, “ಮಿಣ್ಯಂ ಗ್ರಾಮದಲ್ಲಿ ಹುಲಿಗಳ ಹತ್ಯೆ ಘಟನೆ ನೆಡೆದು ಇಂದಿಗೆ ಒಂದು ತಿಂಗಳು ಕಳೆದಿದೆ.
ಈ ಘಟನೆಗೆ ನೈತಿಕ ಹೊಣೆ ಹೊತ್ತು ಅರಣ್ಯ ಸಚಿವರು ತಕ್ಷಣ ರಾಜೀನಾಮೆ ನೀಡಬೇಕಾಗಿತ್ತು, ಆದರೆ ಅರಣ್ಯ ಸಚಿವರು ತಮ್ಮ ಜವಬ್ದಾರಿಯನ್ನು ತಳ್ಳಿಹಾಕಿ ಕೇವಲ ಅಧಿಕಾರಿಗಳನ್ನು ಅಮಾನತಿಗೆ ಒಳಪಡಿಸುವ ಕ್ರಮ ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

