Bengaluru 30°C

ಬೈಕ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ದೇವರ ದರ್ಶನ ಮುಗಿಸಿಕೊಂಡು ತಮ್ಮ ಮನೆಗೆ ಹಿಂತಿರುಗುತ್ತಿದ್ದ ವೇಳೆ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಹಿರಿಕಾಟಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಚಾಮರಾಜನಗರ: ದೇವರ ದರ್ಶನ ಮುಗಿಸಿಕೊಂಡು ತಮ್ಮ ಮನೆಗೆ ಹಿಂತಿರುಗುತ್ತಿದ್ದ ವೇಳೆ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಹಿರಿಕಾಟಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ಮಂಗಳವಾರ ರಾತ್ರಿ ನಡೆದಿದೆ.


ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೂಡ್ಲಾಪುರ ಗ್ರಾಮದ‌ ಬೈಕ್ ಸವಾರ ಶಶಿಧರ್(28), ಪತ್ನಿ ಶಾಲಿನಿ(22) ಹಾಗೂ ತಾಯಿ ಭಾಗ್ಯಮ್ಮ(50) ಮೃತಪಟ್ಟ ದುರ್ದೈವಿಗಳು. ಘಟನೆಯಲ್ಲಿ ಇವರ ಹಿಂದೆ ಬೈಕ್ ನಲ್ಲಿ ಬರುತ್ತಿದ್ದ ನಂಜನಗೂಡು ತಾಲೂಕಿನ ಹೆಮ್ಮರಗಾಲ ಗ್ರಾಮದ ರಾಜಣ್ಣ(40) ಎಂಬುವರಿಗೂ ಗಂಭೀರ ಗಾಯವಾಗಿದೆ.


ಇವರು ಮಂಗಳವಾರ ರಾತ್ರಿ ಬೈಕ್ ನಲ್ಲಿ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಬಳಿಯಿರುವ ಚಿಕ್ಕದೇವಮ್ಮನ ಬೆಟ್ಟಕ್ಕೆ ತೆರಳಿ ಪೂಜೆ ಮುಗಿಸಿಕೊಂಡು ತಮ್ಮ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರಿಕಾಟಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 766 ರಲ್ಲಿ ನಂಜನಗೂಡು ಕಡೆಯಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಶಶಿಧರ್, ಪತ್ನಿ ಶಾಲಿನಿ, ತಾಯಿ ಭಾಗ್ಯಮ್ಮ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇದೇ ವೇಳೆ ಇವರ ಹಿಂದೆ ಬರುತ್ತಿದ್ದ ಬೈಕ್ ಸವಾರ ರಾಜಣ್ಣ ಎಂಬುವರಿಗೂ ಗಾಯಗಳಾಗಿವೆ.


ಅಪಘಾತದ ಮಾಹಿತಿ ಅರಿತ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೂವರ ಮೃತದೇಹಗಳನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿ, ವಾಹನಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


Nk Channel Final 21 09 2023