ಗುಂಡ್ಲುಪೇಟೆ : ಪಟ್ಟಣದ ದೇವರಾಜು ಅರಸು ಕ್ರೀಂಡಾಗಣ ಮುಂಭಾಗ ಲಾರಿ ,ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರಿಗೆ ತೀವ್ರ ಪೆಟ್ಟಾಗಿದ್ದು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ.
ಮೈಸೂರು ಊಟಿ ಹೆದ್ದಾರಿಯಲ್ಲಿ ಬರುತ್ತಿದ್ದ ಕೇರಳದ ಲಾರಿ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಹಿಂದೆ ಬರ್ತಿದ್ದ ಕಾರು ನಿಯಂತ್ರಣ ಸಿಗದೆ ಡಿವೈಡರ್ ದಾಟಿ ಪಕ್ಕದ ರಸ್ತೆಯಲ್ಲಿದ್ದ ಬೈಕಿಗೆ ಗುದ್ದಿದ ರಭಸಕ್ಕೆ ಮನು,ಮಹೇಶ್, ಅಭಿ ಎಂಬವರಿಗೆ ಪೆಟ್ಟಾಗಿದೆ. ಕೂಡಲೇ ಮೂವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿದೆ, ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

