Bengaluru 27°C

ಸಾಲಬಾಧೆಯಿಂದ ಬೇಸತ್ತು ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

ಕೊಳ್ಳೇಗಾಲದ ನಾರಾಯಣಸ್ವಾಮಿ ಗುಡಿ ಬೀದಿಯಲ್ಲಿ ವಾಸವಾಗಿದ್ದ ದಂಪತಿ ಸಾಲಬಾಧೆಯಿಂದ ಬೇಸತ್ತು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಾಮರಾಜನಗರ: ಕೊಳ್ಳೇಗಾಲದ ನಾರಾಯಣಸ್ವಾಮಿ ಗುಡಿ ಬೀದಿಯಲ್ಲಿ ವಾಸವಾಗಿದ್ದ ದಂಪತಿ ಸಾಲಬಾಧೆಯಿಂದ ಬೇಸತ್ತು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ನಾಗೇಶ್ (56) ಪತ್ನಿ ಸತ್ಯಲಕ್ಷ್ಮೀ (46) ಮೃತ ದುರ್ದೈವಿಗಳು. ದಂಪತಿ ಕಳೆದ ಆರು ತಿಂಗಳಿಂದ ಮೈಸೂರಿನಲ್ಲಿ ವಾಸವಾಗಿದ್ದರು. ಶನಿವಾರದಂದು ರಾತ್ರಿ ಕೊಳ್ಳೇಗಾಲಕ್ಕೆ ಬಂದಿದ್ದಾರೆ. ಬೆಳಗಿನ ಜಾವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.


ದಂಪತಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದು, ತೀರಿಸಲಾಗದೆ ಆತ್ಮಹತ್ಯೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಕೊಳ್ಳೇಗಾಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Nk Channel Final 21 09 2023