ಚಾಮರಾಜನಗರ: ಕೆರೆಗೆ ಕಾರು ಬಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಮಾಂಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಸ್ನೇಹಿತರ ದುರಂತ ಅಂತ್ಯ ಕಂಡಿದ್ದಾರೆ.

ಕೊಳ್ಳೇಗಾಲದ ಕುಂತೂರು ಗ್ರಾಮದ ಕೆರೆಗೆ ನಿಯಂತ್ರಣ ತಪ್ಪಿ ಕಾರು ಬಿದ್ದಿದ್ದು, ಮೈಸೂರಿನ ಶುಭ, ಊರ್ಜಿತ್ ಸಾವನ್ನಪ್ಪಿದ್ದಾರೆ. ಮನ್ವಿತ್ ಎಂಬಾತನನ್ನು ಸ್ಥಳೀಯರು ಬಚಾವ್ ಮಾಡಿದ್ದಾರೆ. ಮೈಸೂರಿನಲ್ಲಿ ಟೆಲಿ ಕಾಲರ್ ಆಗಿ ಕೆಲಸ ಮಾಡುತ್ತಿದ್ದ ಈ ಮೂವರು ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು ಮಧ್ಯರಾತ್ರಿ ಕಾರು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು ಈ ಅವಘಡ ಸಂಭವಿಸಿದೆ.

