ಚಾಮರಾಜನಗರ : ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಹನೂರು ತಾಲ್ಲೂಕಿನ ಆನೆಗುಂದಿ ಗ್ರಾಮದಲ್ಲಿ ನಡೆದಿದೆ.

ಪಿ.ಜಿ ಪಾಳ್ಯ ಗ್ರಾಮದ ಚಾಮರಾಜು(25), ಆಕಾಶ್(22) ಮೃತ ದುರ್ದೈವಿಗಳು. ಯುವಕರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಸಂಬಂಧಿಕರ ಗೃಹ ಪ್ರವೇಶಕ್ಕೆಂದು ಯುವಕರು ತವರೂರಿಗೆ ಬಂದಿದ್ದರು.

ದೊಡ್ಡಪ್ಪ ಕೆಂಪರಾಜು ಅವರ ಜಮೀನಿನ ಕೃಷಿ ಹೊಂಡದಲ್ಲಿ ಈಜಲು ಹೋಗಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.