ಚಾಮರಾಜನಗರ : ದೀಪಾವಳಿ ಜಾತ್ರಾ ಮಹೋತ್ಸವ ಹಿನ್ನೆಲೆ ಲಕ್ಷಾಂತರ ಭಕ್ತಾದಿಗಳು ಶ್ರೀ ಮಲೆ ಮಾದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿದ್ದು ಪ್ರಮುಖ ಸ್ಥಳಗಳಲ್ಲಿ ಶೌಚಾಲಯದ ಕೊರತೆ ಉಂಟಾಗಿದೆ ಎಂಬ ದೂರಿ ಕೇಳಿಬಂದಿದ್ದು ಅವ್ಯವಸ್ಥೆ ಕುರಿತು ಮಾತನಾಡಿರುವ ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಹುತೇಕ ಶೌಚಾಲಯಗಳಿಗೆ ನೀರು, ವಿದ್ಯುತ್ ಮೊದಲಾದ ಅಗತ್ಯ ಸೌಲಭ್ಯಗಳಿಲ್ಲವಾದ್ದರಿಂದ ಕೆಲವು ಶೌಚಾಲಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ದಯವಿಟ್ಟು ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಜನರಿಗೆ ಸುಗಮ ಶೌಚಾಲಯ ಮಾಡಿಕೊಡಿ.ಮಾನ್ಯ ಜಿಲ್ಲಾ ದಂಡಾಧಿಕಾರಿಗಳು ಇದರ ಬಗ್ಗೆ ಗಮನ ಹರಿಸಬೇಕು ಎಂದು ಮನವಿ ಮಾಡಿದ್ದಾರೆ.
ಕೋಟ್ಯಾಂತರ ರೂಪಾಯಿ ಶ್ರೀ ಮಲೆ ಮಾದೇಶ್ವರ ದೇವಸ್ಥಾನಕ್ಕೆ ಬರುತ್ತಿದೆ ಆದರೂ ಭಕ್ತಾದಿಗಳಿಗೆ ಈ ರೀತಿಯ ಸಮಸ್ಯೆ ಉಂಟಾಗಿದೆ. ಮೈಸೂರು ನಂಜನಗೂಡು ಗುಂಡ್ಲುಪೇಟೆ ಚಾಮರಾಜನಗರ ಮಹಿಳೆಯರು ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.

