Ad

ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದ ಗ್ಯಾಸ್ ಸಿಲಿಂಡರ್‌ ವಾಹನ

ಗ್ಯಾಸ್ ಸಿಲಿಂಡರ್‌ಗಳನ್ನು ತುಂಬಿಕೊಂಡು ಹೋಗುತ್ತಿದ್ದ ಬೊಲೆರೋ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಘಟನೆ ಬಾಗೇಪಲ್ಲಿ ತಾಲ್ಲೂಕಿನ ಮೂಗಿರೆಡ್ಡಿಪಲ್ಲಿ ಗ್ರಾಮದ ಸಮೀಪ ನಡೆದಿದೆ.

ಚಿಕ್ಕಬಳ್ಳಾಪುರ: ಗ್ಯಾಸ್ ಸಿಲಿಂಡರ್‌ಗಳನ್ನು ತುಂಬಿಕೊಂಡು ಹೋಗುತ್ತಿದ್ದ ಬೊಲೆರೋ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಘಟನೆ ಬಾಗೇಪಲ್ಲಿ ತಾಲ್ಲೂಕಿನ ಮೂಗಿರೆಡ್ಡಿಪಲ್ಲಿ ಗ್ರಾಮದ ಸಮೀಪ ನಡೆದಿದೆ.

Ad
300x250 2

ಅಪಘಾತದಲ್ಲಿ ಬೊಲೆರೋ ವಾಹನದ ಚಾಲಕ ಹಾಗೂ ಕ್ಲೀನರ್‌ಗೆ ಗಂಭೀರ ಗಾಯಗಳಾಗಿದೆ. ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಬಾಗೇಪಲ್ಲಿ ಕಡೆ ಗ್ಯಾಸ್ ಸಿಲಿಂಡರ್‌ಗಳನ್ನು ತುಂಬಿಸಿಕೊಂಡು ತೆರಳುತ್ತಿದ್ದ ಗೂಡ್ಸ್ ಗಾಡಿ, ದ್ವಿಚಕ್ರ ವಾಹನವನ್ನು ತಪ್ಪಿಸಲು ಹಳ್ಳಕ್ಕೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ವಲ್ಪದರಲ್ಲೇ ಗ್ಯಾಸ್ ಸಿಲಿಂಡರ್‌ ವಾಹನದ ಭಾರೀ ಅನಾಹುತ ತಪ್ಪಿ ಹೋಗಿದೆ. ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023
Ad