ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ಹೋಟೆಲ್ಗೆ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಕೋಲಾರ ರಸ್ತೆಯಲ್ಲಿ ನಡೆದಿದೆ.
ಘಟನೆಯಲ್ಲಿ ಹೋಟೆಲ್ನ ಕ್ಯಾಷಿಯರ್ ಶಿವಾನಂದ್ ಹಾಗೂ ಶಾಂತಕುಮಾರ್ ಎಂಬುವವರು ಮೃತಪಟ್ಟಿದ್ದಾರೆ. ಇನ್ನೂ ಮುರುಳಿ ಹಾಗೂ ಶ್ರೀನಿವಾಸ್ ಬಾಬು ಎಂಬುವವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯ ಬಳಿಕ ಟಿಪ್ಪರ್ ಚಾಲಕ ಎಸ್ಕೇಪ್ ಆಗಿದ್ದಾನೆ. ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

