ಚಿಕ್ಕಬಳ್ಳಾಪುರ: ಸಿಎಂ ಸಿದ್ದರಾಮಯ್ಯ ಅವರನ್ನು ಕಂಡರೆ ಬಿಜೆಪಿಗರಿಗೆ ಭಯ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿಗಳು. ಸಿದ್ದರಾಮಯ್ಯ ಕಂಡರೆ ಬಿಜೆಪಿಯವರಿಗೆ ಭಯ. ಅವರನ್ನು ಸಹಿಸಿಕೊಳ್ಳುವ ಶಕ್ತಿ ಕುಮಾರಸ್ವಾಮಿ ಮತ್ತು ವಿಜಯೇಂದ್ರಗೆ ಇಲ್ಲ. ಸಿದ್ದರಾಮಯ್ಯರನ್ನು ಸಿಎಂ ಆಗಿ ನಾವು ಉಳಿಸಿಕೊಳ್ಳುತ್ತೇವೆ. ಸಿಎಂಗೆ ಬಿಜೆಪಿಯವರು ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
ಇದೇ ವೇಳೆ ಆಪರೇಷನ್ ಕಮಲದ ಮೂಲಕ ಸರ್ಕಾರ ಬೀಳಿಸಲು ಪ್ರಯತ್ನ ವಿಚಾರವಾಗಿ ಕೆಲ ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ವಿಚಾರಕ್ಕೆ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯಿಸಿ, ಆಪರೇಷನ್ ಕಮಲ ಮಾಡಲು ನಮ್ಮ ಪಕ್ಷದಲ್ಲಿ ಕೆ.ಸುಧಾಕರ್ ಅಂತಹ ಎಂಎಲ್‌ಎ ಇಲ್ಲ. ಅದು ಹೇಗೆ ಅಪರೇಷನ್ ಕಮಲ ಮಾಡ್ತಾರೆ? ನಮ್ಮ ಶಾಸಕರು ಯಾರೂ ಅಂತವರಲ್ಲ. 135 ಜನ ಎಂಎಲ್‌ಎಗಳು ಇದ್ದೀವಿ, ಬಿಜೆಪಿಯವರಿಗೆ ನಮ್ಮನ್ನು ಖರೀದಿಸುವ ಶಕ್ತಿ ಇದ್ಯಾ ಎಂದು ಪ್ರಶ್ನೆ ಮಾಡಿದ್ದಾರೆ.

