Bengaluru 24°C
Ad

ಚಿಕ್ಕಬಳ್ಳಾಪುರದಲ್ಲಿ ಭೀಕರ ಕಾರು ಅಪಘಾತ: ಮೂವರ ದುರ್ಮರಣ

ಗೌರಿಬಿದನೂರು  ತಾಲ್ಲೂಕಿನ ವಾಟದಹೊಸಹಳ್ಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿದ ಘಟನೆ ನಡೆದಿದೆ. 

ಚಿಕ್ಕಬಳ್ಳಾಪುರ: ಗೌರಿಬಿದನೂರು  ತಾಲ್ಲೂಕಿನ ವಾಟದಹೊಸಹಳ್ಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿದ ಘಟನೆ ನಡೆದಿದೆ.

ಈ ಅಪಘಾತದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನ ಇಬ್ಬರು ಸಿಬ್ಬಂದಿ ಮತ್ತು ಬೆಸ್ಕಾಂನ  ಓರ್ವ ಲೈನ್​ ಮ್ಯಾನ್​ ಮೃತಪಟ್ಟಿದ್ದಾರೆ.

ಮೃತರನ್ನು ಕೆಪಿಟಿಸಿಎಲ್ ವೇಣಗೋಪಾಲ್ (34), ಶ್ರೀಧರ್ (35) ಹಾಗೂ ಬೆಸ್ಕಾಂ ಲೈನ್‌ಮ್ಯಾನ್ ಮಂಜಪ್ಪ (35) ಎಂದು ಗುರುತಿಸಲಾಗಿದೆ.

ಬ್ರೆಝಾ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಕೊಂಡಿದೆ. ರಾತ್ರಿಯೇ ಅಪಘಾತ ನಡೆದಿದೆ ಎಂದು ಶಂಕಿಸಲಾಗಿದ್ದು, ಮುಂಜಾನೆವರೆಗೆ ಯಾರ ಗಮನಕ್ಕೂ ಬಂದಿರಲಿಲ್ಲ.

ಅಪಘಾತದ ತೀವ್ರತೆಗೆ ಪ್ರಯಾಣಿಕರೊಬ್ಬರ ಶವ ಮರದಲ್ಲಿ ನೇತಾಡುತ್ತಿದ್ದುದು ಕಂಡುಬಂದಿದ್ದು, ಇದನ್ನು ನೋಡಿದವರೇ ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Ad
Ad
Nk Channel Final 21 09 2023
Ad