ಚಿಕ್ಕಬಳ್ಳಾಪುರ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಿವಾಸದ ಮೇಲೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಬಂಧಿಸಿರುವ ಘಟನೆ ನಡೆದಿದೆ.
Ad
ಕೌಶಿಕ್, ಚಂದು, ಶ್ರೀನಾಥ್ ಹಾಗೂ ನಿತೀನ್ ಎಂಬುವರನ್ನು ಚಿಕ್ಕಬಳ್ಳಾಫುರ ನಗರ ಠಾಣೆ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮದ್ಯದ ಅಮಲಿನಲ್ಲಿ ಮನೆ ಮೇಲೆ ಕಲ್ಲು ಹೊಡೆದಿದ್ದಾಗಿ ತಿಳಿದುಬಂದಿದೆ.
Ad
ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಜೂನ್ 04ರ ರಾತ್ರಿ ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಪ್ರದೀಪ್ ಈಶ್ವರ್ ನಿವಾಸಕ್ಕೆ ರಾತ್ರಿ ಕಲ್ಲು ಹೊಡೆದಿದ್ದರು.
Ad
ಇದರಿಂದ ಮನೆ ಕಿಟಕಿ ಗಾಜು ಪುಡಿಪುಡಿಯಾಗಿತ್ತು. ಈ ಸಂಬಂಧ ಚಿಕ್ಕಬಳ್ಳಾಫುರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
Ad
Ad