Bengaluru 22°C
Ad

ಚುನಾವಣೆ ಫಲಿತಾಂಶ ಮುನ್ನವೇ ಡಾ.ಕೆ.ಸುಧಾಕರ್ ವಿರುದ್ಧ ಎಫ್ಐಆರ್ ದಾಖಲು

ರಾಜ್ಯ ಸರ್ಕಾರದ ಚಿಹ್ನೆ ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಡಾ.ಕೆ. ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರು ಪ್ರಾದೇಶಿಕ ಆಯುಕ್ತರ ಸೂಚನೆ ಮೇರೆಗೆ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರದ ಚಿಹ್ನೆ ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಡಾ.ಕೆ. ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರು ಪ್ರಾದೇಶಿಕ ಆಯುಕ್ತರ ಸೂಚನೆ ಮೇರೆಗೆ ಪ್ರಕರಣ ದಾಖಲಾಗಿದೆ.

ರಾಜ್ಯ ಸರ್ಕಾರದ ಚಿಹ್ನೆ ಇರುವ ಲೆಟರ್ ಹೆಡ್​ನಲ್ಲಿ ಚುನಾವಣಾ ಆಯುಕ್ತರು ಮತ್ತು ಬೆಂಗಳೂರು ವಿಭಾಗಕ್ಕೆ ಸುಧಾಕರ್ ಪತ್ರ ವ್ಯವಹಾರ ಮಾಡಿದ್ದರು. ಹೀಗಾಗಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಜಿ ಸಚಿವ ಡಾ. ಕೆ.ಸುಧಾಕರ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳು ಸೂಚಿಸಿದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ತಹಸೀಲ್ದಾರ್ ನೀಡಿದ ದೂರಿನ ಮೇರೆಗೆ ಕೇಸ್‌ ದಾಖಲಾಗಿದೆ.

Ad
Ad
Nk Channel Final 21 09 2023
Ad