ಚಿಕ್ಕಬಳ್ಳಾಪುರ: ದೇವನಹಳ್ಳಿ ತಾಲೂಕಿನ ಬೆಟ್ಟೇನಹಳ್ಳಿಯ ದೇವಾಲಯದಲ್ಲಿ ಶ್ರೀರಾಮನವಮಿ ಹಬ್ಬದಂದು ಪ್ರಸಾದ ಸೇವಿಸಿದ ನೂರಾರು ಮಂದಿ ಗ್ರಾಮಸ್ಥರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಫುಡ್ ಪಾಯಿಸನ್ ಸಮಸ್ಯೆಯಿಂದ ಗ್ರಾಮಸ್ಥರು ಬಳಲುತ್ತಿದ್ದಾರೆ.
ಗ್ರಾಮದ ನೂರಾರು ಮಂದಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ಹಲವರು ದೊಡ್ಡಬಳ್ಳಾಪುರ, ದೇವನಹಳ್ಳಿ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಗ್ರಾಮದಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಸಹ ತೆರೆಯಲಾಗಿದೆ. ಗ್ರಾಮದಲ್ಲೇ ಹಲವರಿಗೆ ಚಿಕಿತ್ಸೆ ಕೊಡಲಾಗುತ್ತಿದೆ.
ಪ್ರಸಾದ ಹಾಗೂ ನೀರಿನ ಸ್ಯಾಂಪಲ್‌ನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಪರೀಕ್ಷಿಸಲು ಪ್ರಯೋಗಾಲಾಯಕ್ಕೆ ಕಳುಹಿಸಿದ್ದಾರೆ.

