Bengaluru 28°C
Ad

ನಮ್ಮ ಮನವಿಗೆ ಓಗೊಟ್ಟು ಬರುತ್ತಿರುವುದು ಸ್ವಲ್ಪ ಸಮಾಧಾನ: ಹೆಚ್‌.ಡಿ ಕುಮಾರಸ್ವಾಮಿ

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ಕೊನೆಗೂ ತಾನು ರಾಜ್ಯಕ್ಕೆ ಬರುವುದಾಗಿ ಹೇಳಿದ್ದು ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಚಿಕ್ಕಬಳ್ಳಾಪುರ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ಕೊನೆಗೂ ತಾನು ರಾಜ್ಯಕ್ಕೆ ಬರುವುದಾಗಿ ಹೇಳಿದ್ದು ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ದೇವೇಗೌಡರು ಎಚ್ಚರಿಕೆ ಕೊಟ್ಟರೆ ನಾನು ಮನವಿ ಮಾಡಿಕೊಂಡಿದ್ದೆ. ಅಲ್ಲದೇ ಇದೇ ವೇಳೆ ಕಾರ್ಯಕರ್ತರ ಮೇಲೆ ನಂಬಿಕೆ ಇದ್ದರೆ ಕೂಡಲೇ ಬರಬೇಕು ಎಂದು ಹೇಳಿದ್ದೆವು. ಇದೀಗ ನಮ್ಮ ಮನವಿಗೆ ಓಗೊಟ್ಟು ಬರುತ್ತಿರುವುದು ಇವತ್ತು ನಮಗೂ ಸ್ವಲ್ಪ ಸಮಾಧಾನ ತಂದಿದೆ ಎಂದು ಹೆಚ್‌.ಡಿ ಕುಮಾರಸ್ವಾಮಿ ತಿಳಿಸಿದರು.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮುಂದಿನ ದಿನಗಳಲ್ಲಿ ಏನು ಪ್ರಕ್ರಿಯೆಗಳು ನಡೆಯಬೇಕೋ ನಡೆಯುತ್ತೆ ಇವೆಲ್ಲವೂ ಮುಂದೆ ತನಿಖೆ ನಡೆಯಲಿದ್ದು, ಸತ್ಯ ಹೊರಗೆ ಬರುತ್ತೆ ಎಂದು ಹೆಚ್‌ಡಿಕೆ ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕರ್ತರ ನೋವಿಗೆ ಸ್ಪಂದಿಸುವಂತೆ ಕೇಳಿದ್ದೀನಿ. ಕಾರ್ಯಕರ್ತರ ಬಳಿ ಕ್ಷಮೆ ಕೋರಿದ್ದಾನೆ. ಪಾಪ ಈಗಲಾದರೂ ಅವನು ಕಾರ್ಯಕರ್ತರ ಬಳಿ ಕ್ಷಮೆ ಕೇಳುವ ಮೂಲಕ ಅವರ ಬಳಿ ಅಷ್ಟು ಮಮತೆ ಇದೆ ಎಂಬುದನ್ನು ತೋರಿಸಿಕೊಂಡಿದ್ದಾನೆ ಎಂದರು.

Ad
Ad
Nk Channel Final 21 09 2023
Ad