ಚಿಕ್ಕಮಗಳೂರು: ಸದನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ 11 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದಿದ್ದಾರೆ. ಸರ್ಕಾರ ಇನ್ನೂ 11 ಕೋಟಿ ರೂ. ಬಿಡುಗಡೆಯೇ ಮಾಡಿಲ್ಲ. ಹಣ ಬಿಡುಗಡೆ ಮಾಡದೇ ಅವ್ಯವಹಾರ ಹೇಗೆ ಆಗುತ್ತೆ ಎಂದು ಶಾಸಕ ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಈ ವೇಳೆ ಹಗರಣ ಪ್ರಕರಣ ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ಲ್ಯಾಕ್ ಮೇಲ್ ತಂತ್ರಕ್ಕೆ ಮುಂದಾಗಿದ್ದಾರೆ. ನಾನು ಹಗರಣ ಮಾಡಿದ್ದೇನೆ. ನಿಮ್ಮ ಹಗರಣ ತೆಗಿತೀನಿ ಎನ್ನುವ ವರಸೆಯಲ್ಲಿ ಅವರು ಮಾತನಾಡುತ್ತಿದ್ದು, ಬ್ಲ್ಯಾಕ್ ಮೇಲ್ ತಂತ್ರಕ್ಕೆ ಮುಂದಾಗಿದ್ದಾರೆ.
ಸಿಎಂ ಸದನದ ಒಳಗೆ ಎಷ್ಟೊಂದು ಸುಳ್ಳು ಹೇಳಿದ್ದಾರೆ. ಸದನದ ಒಳಗೆ ಇಷ್ಟು ಸುಳ್ಳು ಹೇಳುವ ಮುಖ್ಯಮಂತ್ರಿಯನ್ನು ಎಂದು ಕಂಡಿಲ್ಲ. ಅವ್ಯವಹಾರ ಆಗಿದ್ದರೆ ಯಾವ ತನಿಖೆಯನ್ನು ಬೇಕಾದರೂ ಮಾಡಲಿ. ಸಿಬಿಐ, ಇಂಟರ್ ಪೋಲ್, ಸಿಐಡಿ ಯಾವುದೇ ತನಿಖೆ ಬೇಕಾದರೂ ಮಾಡಿ ಎಂದು ಅವರು ಸವಾಲು ಹಾಕಿದ್ದಾರೆ.

