Ad

ಡೆಂಗ್ಯೂ ಜ್ವರಕ್ಕೆ 6 ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಮೃತ್ಯು

ಡೆಂಗ್ಯೂ ಜ್ವರಕ್ಕೆ ಆರು ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ.

ಚಿಕ್ಕಮಗಳೂರು: ಡೆಂಗ್ಯೂ ಜ್ವರಕ್ಕೆ ಆರು ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ.

Ad
300x250 2

ಆರು ವರ್ಷದ ಸಾನಿಯಾ ಸಾವನ್ನಪ್ಪಿದ ಬಾಲಕಿ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ. ಮಗಳನ್ನು ಕಳೆದುಕೊಂಡ ತಂದೆ ಆಸಿಫ್ ರಾಜ್ಯ ಸರ್ಕಾರದ ವಿರುದ್ಧ ಬೇಸರ ಹೊರ ಹಾಕಿದ್ದು, ಬಾಲಕಿಯ ಮೃತ ದೇಹದ ಮುಂದೆ ನಿಂತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ನನಗೆ ಯಾವುದೇ ಸಹಾಯ ಬೇಡ, ಸರ್ಕಾರಿ ಆಸ್ಪತ್ರೆ ಅಭಿವೃದ್ಧಿ ಮಾಡಿ. ಡೆಂಗ್ಯೂ ಕಾಯಿಲೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ, ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಹೆಚ್ಚಿನ ಸೌಲಭ್ಯ ಸಿಗಬೇಕು. ನನ್ನ ಮಗಳಿಗಾದ ಸ್ಥಿತಿ ಯಾರಿಗೂ ಆಗುವುದು ಬೇಡ ಎಂದು ಬೇಸರ ಹೊರಹಾಕಿದ್ದಾರೆ.

Ad
Ad
Nk Channel Final 21 09 2023
Ad