Bengaluru 25°C
Ad

ನಿಯಂತ್ರಣ ತಪ್ಪಿ ಏಕಾಏಕಿ ಆಟೋ ಪಲ್ಟಿ: ಚಾಲಕ ದಾರುಣ ಸಾವು

ಚಾಲಕನ ನಿಯಂತ್ರಣ ತಪ್ಪಿ ಆಟೋ ಏಕಾಏಕಿ ಪಲ್ಟಿಯಾಗಿ ಚಾಲಕ ಮೃತಪಟ್ಟಿರುವ ದಾರುಣ ಘಟನೆ ಬಣಕಲ್ ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಆಟೋ ಏಕಾಏಕಿ ಪಲ್ಟಿಯಾಗಿ ಚಾಲಕ ಮೃತಪಟ್ಟಿರುವ ದಾರುಣ ಘಟನೆ ಬಣಕಲ್ ಕೊಟ್ಟಿಗೆಹಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಆಟೋ ಚಾಲಕ ಮಲೆಮನೆ ರವಿ (28) ಮೃತ ಚಾಲಕ.ನಿಯಂತ್ರಣ ತಪ್ಪಿ ಏಕಾಏಕಿ ಆಟೋ ಪಲ್ಟಿಯಾಗಿದೆ. ಪರಿಣಾಮ ಚಾಲಕ ರವಿ ಗಂಭೀರ ಗಾಯಗೊಂಡಿದ್ದ. ಕೂಡಲೇ ಆತನನ್ನು ಮೂಡಿಗೆರೆ ಅಸ್ಪತ್ರೆಗೆ ಸಾಗಿಸಲಾಯಿತು. ಆದರೆ ಮಾರ್ಗ ಮಧ್ಯದಲ್ಲಿ ಚಾಲಕ ಮೃತಪಟ್ಟಿದ್ದಾನೆ.

ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಣಕಲ್ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಬಣಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Ad
Ad
Nk Channel Final 21 09 2023
Ad