Bengaluru 24°C
Ad

ರಾಷ್ಟ್ರೀಯ ಹೆದ್ದಾರಿಯ ಡಿವೈಡರ್​ಗೆ ಕಾರು ಡಿಕ್ಕಿ : ಮಗು ಸೇರಿ ಇಬ್ಬರು ಸ್ಥಳದಲ್ಲೇ ಸಾವು

ರಾಷ್ಟ್ರೀಯ ಹೆದ್ದಾರಿಯ ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿ ಇಬ್ಬರುಬ ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿಯ ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿ ಇಬ್ಬರುಬ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೂಡ್ಲೂರು ಗೇಟ್ ಬಳಿ ನಡೆದಿದೆ.ತುಮಕೂರು ಜಿಲ್ಲೆ ಗುಬ್ಬಿ ಮೂಲದ 2 ವರ್ಷದ ಮಗು ವಿಕ್ರಾಂತ್ ಮತ್ತು ಕಾರು ಚಾಲಕ ಪೃಥ್ವಿ(36) ಮೃತ ಪಟ್ಟಿದ್ದಾರೆ. ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗುಬ್ಬಿಯಿಂದ ಮುರುಡೇಶ್ವರ ದೇಗುಲಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ರೂ ಹೆದ್ದಾರಿ ಪ್ರಾಧಿಕಾರ ಫಲಕ ಅಳವಡಿಸಿರಲಿಲ್ಲ. ರಸ್ತೆ ಕಾಮಗಾರಿ ಹಿನ್ನೆಲೆ ಮುಖ್ಯ ರಸ್ತೆ ಬಂದ್ ಮಾಡಲಾಗಿತ್ತು. ಬೈಪಾಸ್ ತಿರುವಿನಲ್ಲಿ ಡಿವೈಡರ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

Ad
Ad
Nk Channel Final 21 09 2023
Ad