Bengaluru 22°C
Ad

ಬುರ್ಖಾ ಧರಿಸಿದ ಮಹಿಳೆಯರಿಂದ ವೈದ್ಯರಿಗೆ ಚಪ್ಪಲಿಯಿಂದ ಹಲ್ಲೆ!

ಬುರ್ಖಾ ಧರಿಸಿರುವ ಮಹಿಳೆಯರಿಂದ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು: ಬುರ್ಖಾ ಧರಿಸಿರುವ ಮಹಿಳೆಯರಿಂದ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಮೂಳೆ ತಜ್ಞರಾಗಿರುವ ಡಾ. ವೆಂಕಟೇಶ್ ಎಂಬುವವರ ಮೇಲೆ ಹಲ್ಲೆ ನಡೆದಿದೆ.

ವೈದ್ಯರು ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿರುವ ಆರೋಪ ಕೇಳಿಬಂದಿದೆ.  ಇಬ್ಬರು ಬುರ್ಖಾ ಧರಿಸಿರುವ ಮಹಿಳೆಯರು ವೈದ್ಯರ ಕೊರಳ ಪಟ್ಟಿ ಹಿಡಿದು ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅನೇಕ ಜನರು ಹಲ್ಲೆ ನಡೆದ ಸ್ಥಳದಲ್ಲಿದ್ದರು. ಘಟನೆಯ ಹಿನ್ನೆಲಯಲ್ಲಿ ಅಲ್ಲಿದ್ದ ಸಿಬ್ಬಂದಿಗಳು ವೈದ್ಯರ ಮೇಲೆ ಹಲ್ಲೆ ಮಾಡುತ್ತಿರುವುದನ್ನು ತಡೆಯಲು ಪ್ರಯತ್ನಿಸಿರುವುದು ವಿಡಿಯೋದಲ್ಲಿದೆ.

ಅದೇ ರೀತಿ ಘಟನೆಯ ಕುರಿತು ಸಿಟಿ ರವಿ ಖಂಡಿಸಿದ್ದು, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಕರ್ತವ್ಯ ನಿರತ ವೈದ್ಯಾಧಿಕಾರಿ, ಡಾಕ್ಟರ್ ವೆಂಕಟೇಶ್ ಅವರ ಮೇಲೆ ಹಲ್ಲೆಯಾದ ಅಮಾನವೀಯ ಘಟನೆ ನಡೆದಿದೆ. ಗೃಹ ಸಚಿವರಾದ ಡಾ. ಜಿ ಪರಮೇಶ್ವರ್‌ ಇಂತಹ ನೀಚ ಕೃತ್ಯ ಎಸಗಿದವರನ್ನು ಈ ಕೂಡಲೇ ಬಂಧಿಸಿ ವೈದ್ಯಕೀಯ ಸಿಬ್ಬಂದಿಗಳ ರಕ್ಷಣೆಗೆ ಕ್ರಮ ತೆಗೆದುಕೊಳ್ಳಿ ಎಂದು ಒತ್ತಾಯಿಸಿದ್ದಾರೆ.

ಡಿಜಿಪಿ ಅಲೋಕ್ ಮೋಹನ್ ಅವರೇ ತಾವು ಈ ಕೂಡಲೇ ಆರೋಪಿಗಳನ್ನು ಬಂಧಿಸಿ ವೈದ್ಯಕೀಯ ಸಿಬ್ಬಂದಿ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ವಿಶ್ವಾಸವಿಟ್ಟು ಕೆಲಸ ಮಾಡುವ ವಾತಾವರಣ ನಿರ್ಮಾಣ ಮಾಡಿ ಎಂದು ತಿಳಿಸಿದ್ದಾರೆ.

https://x.com/CTRavi_BJP/status/1833415128676487252?

Ad
Ad
Nk Channel Final 21 09 2023