ಚಿಕ್ಕಮಗಳೂರು : ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿ ಮಾಡಿದ್ದು, ಆಗಸ್ಟ್ 15ರಿಂದ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಸಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಸೂಚಿಸಿ ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ad
ಇದೇ ಮೊದಲ ಬಾರಿಗೆ ಶೃಂಗೇರಿ ಶಾರದಾ ಮಠದಿಂದ ವಸ್ತ್ರ ಸಂಹಿತೆ ಜಾರಿ ಮಾಡಿದೆ. ಪುರುಷರಾದಲ್ಲಿ ಧೋತಿ ಶಲ್ಯ ಮತ್ತು ಉತ್ತರೀಯ ಹಾಗೂ ಮಹಿಳೆಯರು ಸೀರೆ ರವಿಕೆ, ಸಲ್ವಾರ್ – ದುಪಟ್ಟ ಅಥವಾ ಲಂಗ ದಾವಣಿಗಳಂತ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ದೇವರ ದರ್ಶನ ಮಾಡಬಹುದು ಎಂದು ಶೃಂಗೇರಿ ಶಾರದಾ ಪೀಠ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಶೃಂಗೇರಿ ಮಠದ ಈ ವಸ್ತ್ರಸಂಹಿತೆ ಜಾರಿ ಆದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಕ್ತರು ವ್ಯಾಪಕ ಬೆಂಬಲ ವ್ಯಕ್ತಪಡಿಸಿದ್ದಾರೆ.
Ad
Ad