Ad

ಹಾರೆಯಿಂದ ತಲೆಗೆ ಹೊಡೆದು ಮಗನನ್ನೇ ಹತ್ಯೆ ಮಾಡಿದ ತಂದೆ

ತಂದೆಯೇ ತನ್ನ ಮಗನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ.ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂದಿರಾ

ಚಿಕ್ಕಮಗಳೂರು: ತಂದೆಯೇ ತನ್ನ ಮಗನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ.ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂದಿರಾ ನಗರ ಎಂಬಲ್ಲಿ ಈ ಘಟನೆ ನಡೆದಿದೆ.

ತಂದೆ ಗೋಪಾಲಗೌಡ ತನ್ನ ಮಗ ಪ್ರಸನ್ನ(38 ವರ್ಷ) ಎಂಬುವರನ್ನು ಮಂಗಳವಾರ ರಾತ್ರಿ ಮಾಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಇಂದಿರಾ ನಗರ ಮನೆಯಲ್ಲಿ ಒಟ್ಟಾಗಿ ವಾಸಿಸುತ್ತಿದ್ದ ತಂದೆ ಹಾಗೂ ಮಗ ಪರಸ್ಪರ ಜಗಳ ಮಾಡಿಕೊಂಡಿದ್ದು ಜಗಳ ವಿಕೋಪಕ್ಕೆ ಹೋಗಿ ಮನೆಯಲ್ಲಿದ್ದ ಹಾರೆಯಿಂದ ಮಗನ ತಲೆಗೆ ಹೊಡೆದಿದ್ದು ತೀವ್ರ ಗಾಯಗೊಂಡ ಮಗ ಪ್ರಸನ್ನ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Ad
Ad
Nk Channel Final 21 09 2023