ಚಿಕ್ಕಮಗಳೂರು: ಮಸೀದಿ ಮುಂಭಾಗ ಪಟಾಕಿ ಸಿಡಿಸಿದ್ದಕ್ಕೆ 25 ಹಿಂದೂ ಕಾರ್ಯಕರ್ತರ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಶೃಂಗೇರಿ ಪಟ್ಟಣದ ಕಾಂಚಿನಗರದಲ್ಲಿ ಗಣೇಶ ಪ್ರತಿಷ್ಠಾಪಿಸಲಾಗಿತ್ತು. ಗುರುವಾರ ರಾತ್ರಿ ವಿಸರ್ಜನಾ ಮೆರವಣಿಗೆ ನಡೆದಿತ್ತು. ಮೆರವಣಿಗೆ ಶೃಂಗೇರಿ ಪಟ್ಟಣದ ವೆಲ್ಕಮ್ ಗೇಟ್ ಸರ್ಕಲ್ಗೆ ಬಂದಿದೆ. ಸರ್ಕಲ್ನಲ್ಲಿದ್ದ ಮಸೀದಿ ಎದುರುಗಡೆ ಹಿಂದೂ ಕಾರ್ಯಕರ್ತರು ಪಟಾಕಿ ಸಿಡಿಸಿ ಡ್ಯಾನ್ಸ್ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಶಾಂತಿ ಭಂಗ, ಭಯದ ವಾತಾವರಣ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದಕ್ಕೆ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದವು.

