ಕೊಟ್ಟಿಗೆಹಾರ: ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ನಿಯಮಿತದ ನಿರ್ದೇಶಕರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದ್ದು, ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಹಾಗೂ ವಖ್ಫ್ ಇಲಾಖೆಯ ಉಪ ಕಾರ್ಯದರ್ಶಿ ಎಂ. ಜ್ಯೋತಿ ಪ್ರಕಾಶ್ ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ. ಈ ನೇಮಕ ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಆ ಮಹತ್ವದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಹರ್ಷ ಮೇಲ್ವಿನ್ ಲಸ್ರಾದೋ ಅವರು ಹಿರಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದು, ಹಲವು ವರ್ಷಗಳಿಂದ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಕೆ.ಪಿ.ಸಿ.ಸಿ.ಯ ವಿವಿಧ ಹುದ್ದೆಗಳಲ್ಲಿ ಅವರು ಕಾರ್ಯನಿರ್ವಹಿಸಿದ್ದು, ತಮ್ಮ ನಿಷ್ಠೆ ಮತ್ತು ಶ್ರದ್ಧೆಯಿಂದ ಪಕ್ಷದ ಬಲಿಷ್ಠ ಬೆಂಬಲಿಗರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ನಿಗಮದ ನಿರ್ದೇಶಕ ಸ್ಥಾನಕ್ಕೆ ನೇಮಕ ಮಾಡಲಾಗಿದೆ.

